20.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಈಗಾಗಲೇ ಮುಂಜಾನೆ ಮಳೆಯಾಗಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಎರಡೂ ಜಿಲ್ಲೆಗಳ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಸಕ್ಲೇಶ್ಪುರ ಸುತ್ತಮುತ್ತ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಗಡಿ ಭಾಗಗಳಲ್ಲಿಯೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನಲ್ಲಿ ಹಗುರ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಾರ್ಚ್ 24 ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.