Advertisement
ಸುದ್ದಿಗಳು

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |

Share

07.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಗುಡುಗು ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9 ಅಥವಾ 10 ರಿಂದ ಮತ್ತೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 7 ಹಾಗೂ 8ರಂದು ಮಳೆಯ ಪ್ರಮಾಣವು ಕಡಿಮೆಯಾಗಿದ್ದು 9ರಿಂದ ಮತ್ತೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದು, ದಕ್ಷಿಣ ಒಳನಾಡಿನಲ್ಲಿ ಸಂಜೆ, ರಾತ್ರಿ ಚಾಮರಾಜನಗರದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಎಪ್ರಿಲ್ 7ರಿಂದ ಒಣಹವೆ ಆವರಿಸುವ ಸಾಧ್ಯತೆಗಳಿವೆ. ಎಪ್ರಿಲ್ 10ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…

4 hours ago

ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು

₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…

4 hours ago

1,000 ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆ ಜೋಡಣೆ

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ಜೋಡಿಸುವ ಗುರಿಯನ್ನು…

4 hours ago

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?

ಕರಾವಳಿ ಮತ್ತು ಮಲೆನಾಡಿನಲ್ಲಿ ನವೆಂಬರ್ 8ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ…

12 hours ago

ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ…

14 hours ago

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

2 days ago