ಹವಾಮಾನ ವರದಿ | 07-04-2025 | ಕೆಲವೆಡೆ ಇಂದೂ ಮಳೆ ನಿರೀಕ್ಷೆ | ಎ.9 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ |

April 7, 2025
2:11 PM
ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣವು ಕಡಿಮೆಯಾಗಿದ್ದರಿಂದ ಮಳೆಯ ಪ್ರಮಾಣವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತ ಚಲಿಸುವ ದಿಕ್ಕಿನ ಸ್ಪಷ್ಟತೆ ಸಿಗಬಹುದು.

08.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಎಪ್ರಿಲ್ 9ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಈಗಿನಂತೆ ಎಪ್ರಿಲ್ 9 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಈಗಿನಂತೆ ಎಪ್ರಿಲ್ 10ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣವು ಕಡಿಮೆಯಾಗಿದ್ದರಿಂದ ಮಳೆಯ ಪ್ರಮಾಣವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತ ಚಲಿಸುವ ದಿಕ್ಕಿನ ಸ್ಪಷ್ಟತೆ ಸಿಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror