08.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಎಪ್ರಿಲ್ 9ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಈಗಿನಂತೆ ಎಪ್ರಿಲ್ 9 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಈಗಿನಂತೆ ಎಪ್ರಿಲ್ 10ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣವು ಕಡಿಮೆಯಾಗಿದ್ದರಿಂದ ಮಳೆಯ ಪ್ರಮಾಣವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತ ಚಲಿಸುವ ದಿಕ್ಕಿನ ಸ್ಪಷ್ಟತೆ ಸಿಗಬಹುದು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…
ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…
ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…
ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…