09.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಕೆಯೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಮೂಡಬಿದರೆ, ಮಂಗಳೂರು, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸುತ್ತಮುತ್ತ ಪ್ರದೇಶದಲ್ಲೂ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಮುನ್ಸೂಚೆನೆಗಳಿವೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಸ್ವಲ್ಪ ಜಾಸ್ತಿಯೇ ಇರಬಹುದು. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಕೊಡಗು ಅಲ್ಲಲ್ಲಿ ಹಾಗೂ ಉಳಿದ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಎಪ್ರಿಲ್ 10ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ವಾಯವ್ಯ ಕಡೆ ಚಲಿಸಿ ಮ್ಯಾನ್ಮಾರ್ ಕಡೆ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುವ ಗಾಳಿಯು ದುರ್ಬಲಗೊಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…