Advertisement
ವೆದರ್ ಮಿರರ್

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

Share

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಾತ್ರ ಮಳೆಯ ಮುನ್ಸೂಚೆನೆ ಇದ್ದರೂ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಈಗಿನಂತೆ ಎಪ್ರಿಲ್ 18ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಎಪ್ರಿಲ್ 18ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದಿಂದ ಇತರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ( ಗಾಳಿಯ ದಿಕ್ಕು ಹಾಗೂ ಪ್ರಭಾವ ತಿಳಿಯಲು ಸಾಧ್ಯವಿಲ್ಲ).
ದಕ್ಷಿಣ ಒಳನಾಡಿನ ಮೈಸೂರು ಉತ್ತರ, ತುಮಕೂರು(ಪಾವಗಢ ಸಹಿತ), ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 12ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಇವತ್ತು, ರಾತ್ರಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮುಂದಿನ 2, 3 ದಿವಸಗಳ ಕಾಲ ಅರಬ್ಬಿ ಸಮುದ್ರ ಕಡೆಯಿಂದ ಅಂದರೆ ಪಶ್ಚಿಮದ ಗಾಳಿಯ ಪ್ರಭಾವ ಹೆಚ್ಚಾಗುವ ಸಾಧ್ಯತೆಗಳಿದ್ದು ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

15 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago