12.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ. ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…