ವೆದರ್ ಮಿರರ್

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

26.04.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕರಾವಳಿ ತೀರದವರೆಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಮಧ್ಯಾಹ್ನ ನಂತರ ಪಶ್ಚಿಮದ ಗಾಳಿಯ ಪ್ರಭಾವ ಹೆಚ್ಚಾಗುವುದರಿಂದ ಕರಾವಳಿಯಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 27 ರಿಂದ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

1 hour ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

2 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

2 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

2 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

2 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

3 hours ago