Advertisement
ವೆದರ್ ಮಿರರ್

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

Share

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.  ಈಗಿನಂತೆ ಎಪ್ರಿಲ್ ಕೊನೆಯ ತನಕವೂ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ ಮೊದಲ ವಾರದಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ. ಚಿತ್ರದುರ್ಗ, ತುಮಕೂರು (ಪಾವಗಢ ಸಹಿತ ), ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 1ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

11 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

12 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

12 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

12 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago