27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ ಕೊನೆಯ ತನಕವೂ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ ಮೊದಲ ವಾರದಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ. ಚಿತ್ರದುರ್ಗ, ತುಮಕೂರು (ಪಾವಗಢ ಸಹಿತ ), ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 1ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿವೆ
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…