28.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು – ಕರ್ನಾಟಕ ಗಡಿ ಭಾಗಗಳ ಅಲ್ಲಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 28ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಕೊಪ್ಪಳ, ದಾವಣಗೆರೆ, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ರಾತ್ರಿ ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 28ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ರಾಜ್ಯದಲ್ಲಿನ ಮಧ್ಯಾಹ್ನ ನಂತರದ ವಾತಾವರಣದಲ್ಲಿ ಗಾಳಿಯ ದಿಕ್ಕು ನಿರ್ದಿಷ್ಟ ಪಥದಲ್ಲಿ ಇಲ್ಲದ ಕಾರಣ ಇಂತಹ ಪ್ರದೇಶಗಳಲ್ಲೇ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490