22.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಸೆಕೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಲವಾಗಿದ್ದರೆ ಕರಾವಳಿಯ ಕೆಲವು ಭಾಗಗಳಲ್ಲಿ ಮುನ್ಸೂಚನೆಗೆ ದೊರಕದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮಾರ್ಚ್ 25 ರಿಂದ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ನಿನ್ನೆ ಅನಿರೀಕ್ಷಿತ ಮಳೆಯಾಗಿದೆ. ಇವತ್ತು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 22ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಲಾ ನಿನಾ ಪ್ರಭಾವ ಇರುವುದರಿಂದ ರಾಜ್ಯದಲ್ಲಿ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ಉತ್ತಮ ಬೇಸಿಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ವರದಿಗಳ ಪ್ರಕಾರ ಈ ಸಲವೂ ಸಮಯಕ್ಕೆ ಸರಿಯಾಗಿ ಉತ್ತಮ ಮುಂಗಾರಿನ ನಿರೀಕ್ಷೆ ಇದೆ.
ಮುಂದಿನ ವರ್ಷದ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು…
ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು…
ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ…
ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜೊತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ …
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್ಗೆ 36 ಪೈಸೆ…
ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ…