Advertisement
ವೆದರ್ ಮಿರರ್

ಹವಾಮಾನ ವರದಿ | 21-03-2025 | ಮಾ.25 ರಿಂದ ವಿವಿದೆಡೆ ಮಳೆ ನಿರೀಕ್ಷೆ | ಇಂದು ಕೆಲವು ಕಡೆ ಮಳೆ ಸಾಧ್ಯತೆ |

Share

22.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಸೆಕೆ ಮುಂದುವರಿಯಲಿದೆ.  ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಗಾಳಿಯ ಪ್ರಭಲವಾಗಿದ್ದರೆ ಕರಾವಳಿಯ ಕೆಲವು ಭಾಗಗಳಲ್ಲಿ ಮುನ್ಸೂಚನೆಗೆ ದೊರಕದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮಾರ್ಚ್ 25 ರಿಂದ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ನಿನ್ನೆ ಅನಿರೀಕ್ಷಿತ ಮಳೆಯಾಗಿದೆ. ಇವತ್ತು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 22ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಲಾ ನಿನಾ ಪ್ರಭಾವ ಇರುವುದರಿಂದ ರಾಜ್ಯದಲ್ಲಿ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ಉತ್ತಮ ಬೇಸಿಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ವರದಿಗಳ ಪ್ರಕಾರ ಈ ಸಲವೂ ಸಮಯಕ್ಕೆ ಸರಿಯಾಗಿ ಉತ್ತಮ ಮುಂಗಾರಿನ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

7 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

7 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago