Advertisement
ವೆದರ್ ಮಿರರ್

ಹವಾಮಾನ ವರದಿ | 02-05-2025 | ಕೆಲವು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ|

Share

03.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಗಾಳಿಯ ಪ್ರಭಾವ ಅಂದಾಜಿಸಲು ಸಾಧ್ಯವಾಗುತ್ತಿಲ್ಲ.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಮೇ 6ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಮೇ 4ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಮೆಯಾಗುವ ಸಾಧ್ಯತೆಗಳಿದ್ದರೂ ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ. ಕಲಬುರ್ಗಿ – ಮಹಾರಾಷ್ಟ್ರ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮೇ 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

7 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago