Advertisement
ವೆದರ್ ಮಿರರ್

ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |

Share

04.05.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಮೋಡ ಸ್ವಲ್ಪ ಹೆಚ್ಚಿದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪುತ್ತೂರು ತಾಲೂಕಿನ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ.
ಈಗಿನಂತೆ ಮೇ 4ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

ಹವಾಮಾನ ಮಾಹಿತಿಗಳನ್ನು ಪಡೆಯಲು “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 4ರಿಂದ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ನಿನ್ನೆ ಅನಿರೀಕ್ಷಿತ ಮಳೆಯಾಗಿದೆ. ಇವತ್ತು ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, (ತುಮಕೂರು ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಹವಾಮಾನ ಮಾಹಿತಿಗಳನ್ನು ಪಡೆಯಲು “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

5 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

5 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

5 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

5 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

6 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago