Advertisement
ವೆದರ್ ಮಿರರ್

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

Share

08.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿಯ ಒಂದೆರಡು ಕಡೆ, ಉತ್ತರ ಕನ್ನಡದ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮೇ 11 ಅಥವಾ 12ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಅಥವಾ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು. ಈಗಿನಂತೆ ಮೇ 10ನೇ ತಾರೀಕಿನ ನಂತರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.

2025 ನೇ ಸಾಲಿನ ಮುಂಗಾರು ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಅಂದರೆ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸುವ ವರದಿಗಳಿವೆ.
ಮೇ 12 ರ ನಕ್ಷೆಯಲ್ಲಿ ಮುಂಗಾರು ರೀತಿಯ ಮಾರುತಗಳ ಚಲನೆಯನ್ನು ಗಮನಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

6 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

13 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

13 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

13 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

23 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago