Advertisement
ವೆದರ್ ಮಿರರ್

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

Share

13.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.  ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

21 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago