ಹವಾಮಾನ ವರದಿ | 16-09-2025 | ಕೆಲವು ಕಡೆ ಉತ್ತಮ ಮಳೆ – ಕೆಲವು ಕಡೆ ಸಾಮಾನ್ಯ ಮಳೆ | ಅಕ್ಟೋಬರ್‌ನಲ್ಲಿ ಮಳೆ ಸಾಧ್ಯತೆ

September 16, 2025
2:35 PM
ಮುಂಗಾರು ಉತ್ತರ ಭಾರತದಲ್ಲಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದಲ್ಲಿ ಅಕ್ಟೊಬರ್ 2ನೇ ವಾರದಲ್ಲಿ ಆರಂಭವಾಗಬಹುದು.

17.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ದಿನಕ್ಕೆ ಒಂದೆರಡು ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 18ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮುಂಗಾರು ಉತ್ತರ ಭಾರತದಲ್ಲಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದಲ್ಲಿ ಅಕ್ಟೊಬರ್ 2 ನೇ ವಾರದಲ್ಲಿ ಆರಂಭವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror