ಹವಾಮಾನ ವರದಿ | 22-03-2024 | ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಮಳೆಯ ಸಾಧ್ಯತೆ ಕ್ಷೀಣ | ಕೊಡಗಿನ ಕೆಲವು ಕಡೆ ಮಳೆ ನಿರೀಕ್ಷೆ |

March 22, 2025
12:19 PM
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಕೂಡಾ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಘಟ್ಟದ ತಪ್ಪಲು ಪ್ರದೇಶದಲ್ಲಿ ತುಂತುರು ಮಳೆ ಸಾಧ್ಯತೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರಿಯುವ ಲಕ್ಷಣಗಳಿವೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಮಳೆಯ ಸಾಧ್ಯತೆಗಳಿದೆ.

23.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡ ಬರುವ ಸಾಧ್ಯತೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸದ್ಯದಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿವೆ. ಒಂದೆರಡು ದಿನ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರಿಯುವ ಲಕ್ಷಣಗಳಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾರ್ಚ್ 25 ಹಾಗೂ 26ರಂದು ಸ್ವಲ್ಪ ಮಳೆಯ ಸಾಧ್ಯತೆಗಳಿದ್ದು, ನಂತರ ಬಿಸಿಲು ಮುಂದುವರಿಯಬಹುದು. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಾರ್ಚ್ 25ರಂದು ಸ್ವಲ್ಪ ಮಳೆಯ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ದಾವಣಗೆರೆ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 22 ಹಾಗೂ 23ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿದ್ದು, ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಮಾರ್ಚ್ 23ರಿಂದ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.

ಮಾರ್ಚ್ ತಿಂಗಳಲ್ಲಿ, ಇನ್ನೆರಡು ದಿನಗಳ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror