ಹವಾಮಾನ ವರದಿ | 23-03-2025 | ಅಲ್ಲಲ್ಲಿ ಮಳೆ ನಿರೀಕ್ಷೆ | ಮಾ.25 ನಂತರ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣ

March 23, 2025
2:52 PM
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

24.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮಾರ್ಚ್ 24 ಹಾಗೂ 25ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮಾರ್ಚ್ 24 ಹಾಗೂ 25ರಂದು ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಮಳೆಯ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಹನಿ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಳನಾಡು ಭಾಗಗಳಲ್ಲಿ ಮಾರ್ಚ್ 24ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror