25.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತರ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ( ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗಾಳಿಯ ಸಹಿತ ಮಳೆಯಾದರೆ ಮಾತ್ರ ಜಿಲ್ಲೆಗಳ ಉಳಿದ ಭಾಗಗಳಿಗೆ ಮಳೆ ವ್ಯಾಪಿಸಬಹುದು ) ಈಗಿನಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು,ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು. ಈಗಿನಂತೆ ಮುಂದಿನ 2 ದಿವಸಗಳ ಕಾಲ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ .
ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ, ಬೆಂಗಳೂರು – ತಮಿಳುನಾಡು ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಆದರೆ ಮಾರ್ಚ್ 30 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.