ಹವಾಮಾನ ವರದಿ | 25-03-2025 | ರಾಜ್ಯದ ಕೆಲವು ಕಡೆ ಮಳೆ ನಿರೀಕ್ಷೆ |

March 25, 2025
2:19 PM
ಕರಾವಳಿ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಒಂದೆರಡು ದಿನ ಮಳೆಯಾಗುವ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.

26.03.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಆದರೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಕಡಿಮೆಯಾದರೆ ಮಾತ್ರ ಮಳೆಯ ಸಾಧ್ಯತೆ ಇದೆ. ಈಗಿನಂತೆ ಇನ್ನೆರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಹೆಚ್ಚಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 2 ದಿವಸಗಳ ಕಾಲ ಈ ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಮುನ್ಸೂಚನೆ ಇಲ್ಲದಿದ್ದರೂ ಬೆಳಗಾವಿ, ಧಾರವಾಡ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಅನಿರೀಕ್ಷಿತವಾಗಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಿತ್ರದುರ್ಗದ ಒಂದೆರಡು ಕಡೆ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆ ಇದೆ.  ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್
October 31, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ
October 31, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror