26.03.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಆದರೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಕಡಿಮೆಯಾದರೆ ಮಾತ್ರ ಮಳೆಯ ಸಾಧ್ಯತೆ ಇದೆ. ಈಗಿನಂತೆ ಇನ್ನೆರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಹೆಚ್ಚಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 2 ದಿವಸಗಳ ಕಾಲ ಈ ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಮುನ್ಸೂಚನೆ ಇಲ್ಲದಿದ್ದರೂ ಬೆಳಗಾವಿ, ಧಾರವಾಡ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಅನಿರೀಕ್ಷಿತವಾಗಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಿತ್ರದುರ್ಗದ ಒಂದೆರಡು ಕಡೆ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…