ಹವಾಮಾನ ವರದಿ | 26-03-2025 | ಇಂದೂ ಕೆಲವು ಕಡೆ ಗಾಳಿ ಸಹಿತ ಮಳೆ ಸಾಧ್ಯತೆ | ಮಾ.27 ರಿಂದ ಮಳೆ ಕಡಿಮೆ |

March 26, 2025
1:29 PM
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವವೂ ಜೋರಿರಬಹುದು. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಬಹುತೇಕ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಉಳಿದ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ - ಗೋವಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

27.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವವೂ ಜೋರಿರಬಹುದು. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಾರ್ಚ್ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಬಹುತೇಕ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಉಳಿದ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಾರ್ಚ್ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಒಳನಾಡು : ಬೆಳಗಾವಿ – ಗೋವಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ – ಬಳ್ಳಾರಿ ಗಡಿಭಾಗಗಳಲ್ಲಿ ಸಹ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಾರ್ಚ್ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror