27.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವವೂ ಜೋರಿರಬಹುದು. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಾರ್ಚ್ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಬಹುತೇಕ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಉಳಿದ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಾರ್ಚ್ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.
ಒಳನಾಡು : ಬೆಳಗಾವಿ – ಗೋವಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ – ಬಳ್ಳಾರಿ ಗಡಿಭಾಗಗಳಲ್ಲಿ ಸಹ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಾರ್ಚ್ 27 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಅಡಿಕೆಯ ಗುಣಮಟ್ಟದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ "ಕ್ಯಾಂಪ್ಕೋ ಬ್ರಾಂಡ್ ಅಡಿಕೆ" ಗೆ ಪ್ರತ್ಯೇಕವಾದ…
ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ…
ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು…
ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್…
ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ…
ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ ಕಾರ್ಯವನ್ನು ನಡೆಸಿದ್ದು, ಕಳೆದ ವರ್ಷಕ್ಕೆ…