29.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ದ. ಕ. ಉಳಿದ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಎಪ್ರಿಲ್ 1 ಅಥವಾ 2 ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಪ್ರಿಲ್ 2 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 2ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ ಲಕ್ಷಣಗಳಿವೆ.
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…