Advertisement
ವೆದರ್ ಮಿರರ್

ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |

Share

29.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ದ. ಕ. ಉಳಿದ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಎಪ್ರಿಲ್ 1 ಅಥವಾ 2 ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಪ್ರಿಲ್ 2 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 2ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.  ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

13 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

13 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

13 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

13 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago