06.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಪ್ರಿಲ್ 7 ರಿಂದ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ದಕ್ಷಿಣ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 6 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…