ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |

March 19, 2025
12:46 PM
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಾರ್ಚ್ 24 ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

20.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಈಗಾಗಲೇ ಮುಂಜಾನೆ ಮಳೆಯಾಗಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಎರಡೂ ಜಿಲ್ಲೆಗಳ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಸಕ್ಲೇಶ್ಪುರ ಸುತ್ತಮುತ್ತ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಗಡಿ ಭಾಗಗಳಲ್ಲಿಯೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನಲ್ಲಿ ಹಗುರ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಾರ್ಚ್ 24 ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror