10.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಸಂಜೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 11ರ ತನಕ ಉತ್ತರ ಕನ್ನಡ, ಅಕ್ಟೊಬರ್ 12ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹೆಚ್ಚಿರಬಹುದು. ಈಗಿನಂತೆ ಅಕ್ಟೊಬರ್ 12ರ ತನಕ ಈ ಮಳೆಯು ಮುಂದುವರಿಯುವ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 10ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 12ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಒಮಾನ್ ಕರಾವಳಿಯಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.


