Advertisement
ವೆದರ್ ಮಿರರ್

ಹವಾಮಾನ ವರದಿ | 09-10-2025 | ಅ.12 ರವರೆಗೆ ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ

Share

10.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಸಂಜೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 11ರ ತನಕ ಉತ್ತರ ಕನ್ನಡ, ಅಕ್ಟೊಬರ್ 12ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹೆಚ್ಚಿರಬಹುದು. ಈಗಿನಂತೆ ಅಕ್ಟೊಬರ್ 12ರ ತನಕ ಈ ಮಳೆಯು ಮುಂದುವರಿಯುವ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 10ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 12ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಒಮಾನ್ ಕರಾವಳಿಯಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

12 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

18 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago