Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |

April 19, 2024
11:00 AM
ರಾಜ್ಯದ ಹಲವು ಕಡೆ ಇಂದು ಮಳೆಯಾಗಬಹುದು.ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

20.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಗುಡುಗು ಸಹಿತ ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಧಾರವಾಡ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror