22.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕರಾವಳಿ ತೀರ ಭಾಗಗಳ ತನಕವೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದ್ದು, ಒಣ ಹವೆಯೊಂದಿಗೆ ಚಳಿಯ ವಾತಾವರಣವೂ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ 24 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಾಮಾನ್ಯ ಚಳಿಯ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 25 ರಿಂದ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆಯೇ ತುಂತುರು ಮಳೆಯಾಗಿದೆ. ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 24ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಕಾರಣದಿಂದ ಅರಬ್ಬಿ ಸಮುದ್ರದ ಗಾಳಿಯೂ ಪಶ್ಚಿಮಕ್ಕೆ ಚಲಿಸುತ್ತಿದೆ.
ಬಂಗಾಳಕೊಲ್ಲಿಯ ಕಡೆಯಿಂದ ರಾಜ್ಯದ ಕಡೆಗೆ ಬೀಸುತ್ತಿರುವ ಹಿಂಗಾರು ಮಾರುತಗಳು, ನವೆಂಬರ್ 24 ರಂದು ಅಂಡಮಾನ್ ಬಳಿ ಉಂಟಾಗಲಿರುವ ಚಂಡಮಾರುತದ ಪ್ರಭಾವದಿಂದ ಆ ಕಡೆಗೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಾಗುವ ಸಾಧ್ಯತೆಗಳಿವೆ. ಇದರೊಂದಿಗೆ ಒಣ ಹವೆ ಹಾಗೂ ಚಳಿಯ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.
ಬಂಗಾಳಕೂಲ್ಲಿಯ ಚಂಡಮಾರುತವು ಮಧ್ಯ ಬಂಗಾಳಕೊಲ್ಲಿಯಯಿಂದ ಉತ್ತರಕ್ಕೆ ಚಲಿಸಿ ನವೆಂಬರ್ 30 ಅಥವಾ ಡಿಸೆಂಬರ್ 1ರಂದು ಪಶ್ಚಿಮ ಬಂಗಾಳ ಅಥವಾ ಬಾಂಗ್ಲಾದೇಶ ಕರಾವಳಿಗೆ ತಲಪುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಕೊನೆಗೊಳ್ಳಬಹುದು. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…



