Advertisement
ವೆದರ್ ಮಿರರ್

ಹವಾಮಾನ ವರದಿ | 21-11-2025 | ನ.24 ರಂದು ಮಳೆ- ನಂತರ ಚಳಿ ಆರಂಭ

Share

22.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕರಾವಳಿ ತೀರ ಭಾಗಗಳ ತನಕವೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದ್ದು, ಒಣ ಹವೆಯೊಂದಿಗೆ ಚಳಿಯ ವಾತಾವರಣವೂ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ 24 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಾಮಾನ್ಯ ಚಳಿಯ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 25 ರಿಂದ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆಯೇ ತುಂತುರು ಮಳೆಯಾಗಿದೆ. ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 24ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಕಾರಣದಿಂದ ಅರಬ್ಬಿ ಸಮುದ್ರದ ಗಾಳಿಯೂ ಪಶ್ಚಿಮಕ್ಕೆ ಚಲಿಸುತ್ತಿದೆ.
ಬಂಗಾಳಕೊಲ್ಲಿಯ ಕಡೆಯಿಂದ ರಾಜ್ಯದ ಕಡೆಗೆ ಬೀಸುತ್ತಿರುವ ಹಿಂಗಾರು ಮಾರುತಗಳು, ನವೆಂಬರ್ 24 ರಂದು ಅಂಡಮಾನ್ ಬಳಿ ಉಂಟಾಗಲಿರುವ ಚಂಡಮಾರುತದ ಪ್ರಭಾವದಿಂದ ಆ ಕಡೆಗೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಾಗುವ ಸಾಧ್ಯತೆಗಳಿವೆ. ಇದರೊಂದಿಗೆ ಒಣ ಹವೆ ಹಾಗೂ ಚಳಿಯ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.

ಬಂಗಾಳಕೂಲ್ಲಿಯ ಚಂಡಮಾರುತವು ಮಧ್ಯ ಬಂಗಾಳಕೊಲ್ಲಿಯಯಿಂದ ಉತ್ತರಕ್ಕೆ ಚಲಿಸಿ ನವೆಂಬರ್ 30 ಅಥವಾ ಡಿಸೆಂಬರ್ 1ರಂದು ಪಶ್ಚಿಮ ಬಂಗಾಳ ಅಥವಾ ಬಾಂಗ್ಲಾದೇಶ ಕರಾವಳಿಗೆ ತಲಪುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಕೊನೆಗೊಳ್ಳಬಹುದು. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

50 minutes ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 hour ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 hour ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

1 hour ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago