ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

June 20, 2025
9:36 PM

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಸುಳಕೂಡ ಬ್ಯಾರೇಜ್  ಮುಖಾಂತರ ದೂಧಗಂಗಾ ನದಿಗೆ 16 ಸಾವಿರದ 544 ಕ್ಯೂಸೆಕ್ ಮತ್ತು ರಾಜಾಪುರ ಬ್ಯಾರೇಜ್ ಮುಖಾಂತರ ಕೃಷ್ಣಾ ನದಿಗೆ 62 ಸಾವಿರದ 500 ಕ್ಯೂಸೆಕ್ ನೀರು ರಾಜ್ಯಕ್ಕೆ ಹರಿದು ಬರುತ್ತಿದ್ದು, ನದಿಗಳ ಒಡಲು ತುಂಬಿ ಹರಿಯುತ್ತಿವೆ. ವೇದಗಂಗಾ ನದಿಯ ಬಾರವಾಡ-ಕುನ್ನೂರ, ಅಕ್ಕೊಳ-ಸಿದ್ದಾಳ, ಭೋಜ-ಶಿವಾಪುರವಾಡಿ, ದೂಧಗಂಗಾ ನದಿಯ ಕಾರದಗಾ-ಭೋಜ, ಮಲಿಕವಾಡ-ದತ್ತವಾಡ ಮತ್ತು ಕೃಷ್ಣಾ ನದಿಯ ಕಲ್ಲೋಳ-ಯಡೂರ, ಮಾಂಜರಿ-ಸವದತ್ತಿ ಬ್ಯಾರೇಜ್‌ಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ.

ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾವಿ ಮಾಹಿತಿ ನೀಡಿ,” ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ಉಪವಿಭಾಗದಲ್ಲಿ 6 ಸೇತುವೆಗಳು ಮುಳುಗಡೆಯಾಗಿವೆ.  ಪ್ರವಾಹ ಪರಿಸ್ಥಿತಿ  ಎದುರಿಸಲು ತಾಲೂಕಾಡಳಿತ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ” ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror