ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

August 14, 2025
2:48 PM

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಬಿಡುವಿನ ಅವಧಿ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ 17 ರಿಂದ 20 ರ ತನಕ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, 17 ರಿಂದ 19 ರ ತನಕ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 17ರಿಂದ 19ರ ತನಕ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 20 ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror