Advertisement
ವೆದರ್ ಮಿರರ್

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

Share

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಬಿಡುವಿನ ಅವಧಿ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ 17 ರಿಂದ 20 ರ ತನಕ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, 17 ರಿಂದ 19 ರ ತನಕ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 17ರಿಂದ 19ರ ತನಕ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 20 ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

20 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

20 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

21 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago