ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಇಂದು ಕೂಡ ಮಳೆ ಮುಂದುವರೆಯಲಿದ್ದು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಉಡುಪಿ ದಕ್ಷಿಣ ಕನ್ನಡ ಭಾಗದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಬಿರು ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ.ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಚಿಕ್ಕೋಡಿ, ರಾಯಭಾಗ, ಬೈಲಹೊಂಗಲ, ಕಲಘಟಗಿ, ಹಳಿಯಾಳ, ರಾಯಭಾಗ, ಬೈಲಹೊಂಗಲ, ಬೀದರ್, ಭಾಲ್ಕಿ, ನಿಪ್ಪಾಣಿ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ಕಳೆದ ೨೪ ಗಂಡೆಯಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…