Advertisement
ಸುದ್ದಿಗಳು

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

Share

19.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೊತೆಗೆ ಸ್ವಲ್ಪ ಗಾಳಿ ಹಾಗೂ ಬಿಸಿಲು ಸಹ ಇರಬಹುದು. ಈಗಿನಂತೆ ಜೂನ್ 21ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 22ರಿಂದ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಜೂನ್ 19ರಿಂದ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿದ್ದು, ಬೆಳೆಗಳಿಗೆ ಔಷಧಿ ಸಿಂಪಡಿಸಲು 21ರ ತನಕ ಅವಕಾಶ ಸಿಗಬಹುದು.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ಜೂನ್ 25 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳ ತಲುಪಿದ್ದು, ಮುಂದೆ ಬಿಹಾರ ಕಡೆಗೆ ಚಲಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

3 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

12 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

12 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

13 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

23 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

23 hours ago