ವಿಟ್ಲದಲ್ಲಿ ಮನೆ ನೆಲಸಮ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿಟ್ಲದ ಮಂಗಲಪದವು ಸಮೀಪದ ಗುಡ್ಡ ಕುಸಿದ ಮನೆ ನೆಲಸಮವಾಗಿದ್ದು ಮನೆಯಲ್ಲಿದ್ದ 6 ಮಂದಿಗೆ ಗಾಯವಾಗಿದೆ. ವ್ಯಾಪಾರಿ ಅಬ್ದುಲ್ಲ ಎಂಬುವವರ ಮನೆ ಇದಾಗಿದೆ.
ಈ ನಡುವೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದ್ದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಕೊಡಗು, ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಅತಿಯಾಗಿ ಮಳೆಯಾಗುತ್ತಿದೆ. ಸೆ. 21 ಹಾಗೂ 22 ರಂದು ಕರ್ನಾಟಕದ ಕರಾವಳಿ ಭಾಗದಲ್ಲಿಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಕೊಡಗಿನಲ್ಲಿ 115 ಮಿಲಿ ಮೀಟರ್ನಿಂದ 204 ಮಿಲಿ ಮೀಟರ್ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಟ್ಟ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel