17.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಅ. 17ರಿಂದ ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಹಿತ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಅ. 17ರಿಂದ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗದಗ, ದಾವಣಗೆರೆ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ( ನಿನ್ನೆಯ ಮಹಾಮಳೆಯ ಮುನ್ಸೂಚನೆ ಇಲ್ಲವಾಗಿದೆ.) , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 17ರಿಂದ ಸಂಜೆ ಹಾಗೂ ರಾತ್ರಿಯ ವೇಳೆ ಗುಡುಗು ಸಹಿತ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿರುವ ವಾಯುಭಾರ ಕುಸಿತವು ಅ. 17ರಂದು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗಲಿದೆ. ಸುಮಾರು ಅ.24 ನಂತರ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿದ್ದು, ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಆಂದ್ರಾ, ತಮಿಳುನಾಡು ಕರಾವಳಿ ಕಡೆ ಸಾಗಿದರೆ ಮಾತ್ರ ಚುರುಕಾಗಬಹುದು.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…