05.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 6 ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 8 ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ ಹಾಗೂ ಗದಗ ಜಿಲ್ಲೆಯ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಪಶ್ಚಿಮ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 5ರಿಂದ ಬಿಡುವು ಪಡೆವ ಮಳೆಯು ನವೆಂಬರ್ 8ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಂಡರೆ, ಬಂಗಾಳಕೊಲ್ಲಿಯ ತಿರುಗುವಿಕೆಯು ಬಲಗೊಳ್ಳುವ ಲಕ್ಷಣಗಳಿವೆ.