14.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮಧ್ಯಾಹ್ನ ನಂತರ ಮೋಡ ಸಂಜೆ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಈಗಿನಂತೆ ಈ ಹಿಂಗಾರು ಮಳೆಯು ನವೆಂಬರ್ 18 ಅಥವಾ 19ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ಹಿಂಗಾರು ಮಳೆಯು ನವೆಂಬರ್ 18ರ ತನಕ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಧಾರವಾಡ, ಹಾವೇರಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.
ಈ ಹಿಂಗಾರು ಮಳೆಯು ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 16 ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…