ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

June 11, 2025
9:14 PM
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ  ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು  ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ  ಗುರುವಾರದಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಕೂಡಾ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಕೇರಳ, ಮಾಹೆ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ  ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು  ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ  ಗುರುವಾರದಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಕೂಡಾ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಇದೇ ವೇಳೆ  ಮುಂದಿನ ಎರಡು ದಿನಗಳಲ್ಲಿ ಉತ್ತರ ಮಧ್ಯಪ್ರದೇಶ, ಪಂಜಾಬ್, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶಗಳಲ್ಲಿ  ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಸ್ಥಾನದಲ್ಲಿ ಶುಕ್ರವಾರದವರೆಗೆ ತೀವ್ರ ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ, ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, 43.8 ಡಿಗ್ರಿ ತಾಪಮಾನ ದಾಖಲಾಗಿದೆ.  ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕೇರಳ ಮಾಹೆ, ಕರ್ನಾಟಕ ಮತ್ತು ಲಕ್ಷ ದ್ವೀಪದಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಬಿರುಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ನಾಳೆಯಿಂದ ಶನಿವಾರದವರೆಗೆ ಪಶ್ಚಿಮ ಭಾರತದಲ್ಲಿ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ. ಮುಂದಿನ ನಾಲ್ಕೈದು ದಿನಗಳವರೆಗೆ ಉತ್ತರಾಖಂಡ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror