ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

May 26, 2025
10:46 PM
ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ. ನೂರು ವರ್ಷದಲ್ಲೇ ಬೆಂಗಳೂರಲ್ಲಿ ಈ ಬಾರಿ ಬಿದ್ದ ಮಳೆ ದಾಖಲೆ ಸೃಷ್ಟಿಸಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮೇ ತಿಂಗಳಲ್ಲೇ 307.9 ಮಿಮೀ ಮಳೆ ದಾಖಲೆಯಾಗಿದೆ. 2023 ಮೇ ತಿಂಗಳಲ್ಲಿ 305.4 ಮಿಮೀ ಮಳೆ ದಾಖಲಾಗಿತ್ತು. ಇದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ ಎಂದು ಅವರು ಹೇಳಿದ್ದಾರೆ. ಜೂನ್ 5ಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇತ್ತು. ಆದರೆ ಮೇ 24 ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಸಂಪೂರ್ಣ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಇದೇ 30 ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror