ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ. ನೂರು ವರ್ಷದಲ್ಲೇ ಬೆಂಗಳೂರಲ್ಲಿ ಈ ಬಾರಿ ಬಿದ್ದ ಮಳೆ ದಾಖಲೆ ಸೃಷ್ಟಿಸಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮೇ ತಿಂಗಳಲ್ಲೇ 307.9 ಮಿಮೀ ಮಳೆ ದಾಖಲೆಯಾಗಿದೆ. 2023 ಮೇ ತಿಂಗಳಲ್ಲಿ 305.4 ಮಿಮೀ ಮಳೆ ದಾಖಲಾಗಿತ್ತು. ಇದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ ಎಂದು ಅವರು ಹೇಳಿದ್ದಾರೆ. ಜೂನ್ 5ಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇತ್ತು. ಆದರೆ ಮೇ 24 ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಸಂಪೂರ್ಣ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದೇ 30 ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…