ಹವಾಮಾನ ವರದಿ | 01-07-2025 | ಜುಲೈ 6 ರಿಂದ ಮಳೆ ಕಡಿಮೆ | ಜುಲೈ ತಿಂಗಳಲ್ಲಿ ಮುಂಗಾರು ಹೇಗಿರಬಹುದು..?

July 1, 2025
12:32 PM
ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಗಳಿವೆ

02.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 5 ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 6 ರಿಂದ ಸ್ವಲ್ಪ ಕಡಿಮೆಯಾದರೂ ಜುಲೈ 10 ರಿಂದ ಮತ್ತೆ ಹೆಚ್ಚಾಗುವ ನಿರೀಕ್ಷೆ ಇದೆ. (ಮಳೆ ಸಂಪೂರ್ಣ ಬಿಟ್ಟು ಸಿಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಮಧ್ಯ ಬಿಡುವಿನ ವೇಳೆಯಲ್ಲಿ ಔಷಧಿ ಸಿಂಪರಣೆ ಮಾಡಬೇಕಾಗಬಹುದು)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 6 ರಿಂದ ಕಡಿಮೆಯಾದರೂ 10 ರಿಂದ ಮತ್ತೆ ಜೋರಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹೆಚ್ಚಿನ ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಜೊತೆಗೆ ಒಂದೆರಡು ಕಡೆ ಸಾಮಾನ್ಯ ಮಳೆಯೂ ಇರಬಹುದು.

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸರಾಸರಿ ಕಳೆದ 2023 ಹಾಗೂ 2024 ನೇ ಸಾಲಿನಲ್ಲಿ ಜುಲೈ 1700 mm ಗಿಂತಲೂ ಅಧಿಕ ಮಳೆಯಾಗಿತ್ತು. 2025ರ ಲ್ಲಿ ಸ್ವಲ್ಪ ಕಡಿಮೆ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ
November 13, 2026
3:58 PM
by: ಸಾಯಿಶೇಖರ್ ಕರಿಕಳ
Sunada Sangeetha Kala School students who secured distinction in Vidwat examination.
ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ
November 13, 2026
12:25 PM
by: ದ ರೂರಲ್ ಮಿರರ್.ಕಾಂ
Ballari homemaker R.J. Sujatha with medicinal plants in her rooftop garden
ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ
November 13, 2026
9:01 AM
by: ದ ರೂರಲ್ ಮಿರರ್.ಕಾಂ
Used cooking oil collected from hotels for biodiesel and non-food applications
ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್
November 13, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror