Advertisement
ಸುದ್ದಿಗಳು

ಹವಾಮಾನ ವರದಿ | 01-07-2025 | ಜುಲೈ 6 ರಿಂದ ಮಳೆ ಕಡಿಮೆ | ಜುಲೈ ತಿಂಗಳಲ್ಲಿ ಮುಂಗಾರು ಹೇಗಿರಬಹುದು..?

Share

02.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 5 ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 6 ರಿಂದ ಸ್ವಲ್ಪ ಕಡಿಮೆಯಾದರೂ ಜುಲೈ 10 ರಿಂದ ಮತ್ತೆ ಹೆಚ್ಚಾಗುವ ನಿರೀಕ್ಷೆ ಇದೆ. (ಮಳೆ ಸಂಪೂರ್ಣ ಬಿಟ್ಟು ಸಿಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಮಧ್ಯ ಬಿಡುವಿನ ವೇಳೆಯಲ್ಲಿ ಔಷಧಿ ಸಿಂಪರಣೆ ಮಾಡಬೇಕಾಗಬಹುದು)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 6 ರಿಂದ ಕಡಿಮೆಯಾದರೂ 10 ರಿಂದ ಮತ್ತೆ ಜೋರಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹೆಚ್ಚಿನ ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಜೊತೆಗೆ ಒಂದೆರಡು ಕಡೆ ಸಾಮಾನ್ಯ ಮಳೆಯೂ ಇರಬಹುದು.

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸರಾಸರಿ ಕಳೆದ 2023 ಹಾಗೂ 2024 ನೇ ಸಾಲಿನಲ್ಲಿ ಜುಲೈ 1700 mm ಗಿಂತಲೂ ಅಧಿಕ ಮಳೆಯಾಗಿತ್ತು. 2025ರ ಲ್ಲಿ ಸ್ವಲ್ಪ ಕಡಿಮೆ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

7 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

7 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

8 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

8 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

8 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago