ಹವಾಮಾನ ವರದಿ | 30 – 07-2024 | ರಾಜ್ಯದಲ್ಲಿ ಸಾಮಾನ್ಯ ಮಳೆ | ಆ.1 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

July 29, 2024
1:50 PM
ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಆಗಷ್ಟ್ 1 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 2 ಅಥವಾ 3 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

30. 07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಮುನ್ಸೂಚನೆಯಷ್ಟು ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ)

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ರಾಮನಗರ, ಬೆಂಗಳೂರು ನಗರ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಕಲಬರ‍್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಾಗಲೇ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಆಗಷ್ಟ್ 1 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 2 ಅಥವಾ 3 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror