30. 07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಮುನ್ಸೂಚನೆಯಷ್ಟು ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ)
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ರಾಮನಗರ, ಬೆಂಗಳೂರು ನಗರ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಕಲಬರ‍್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಆಗಷ್ಟ್ 1 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 2 ಅಥವಾ 3 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…